ಗುಬ್ಬಿ : ಪಟ್ಟಣದ ಮಾರುತಿ ನಗರ ರಾಯವಾರ ರಸ್ತೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಶನೇಶ್ವರಸ್ವಾಮಿ ಅವರ 24ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಶನೇಶ್ವರಸ್ವಾಮಿಯವರಿಗೆ ರುದ್ರಾಭಿಷೇಕ, ಗಣಪತಿ ಹೋಮ, ವಾಸ್ತು ಹೋಮ, ನವಗ್ರಹ ಹೋಮ, ನಂತರ ಶ್ರೀಶನೇಶ್ವರಸ್ವಾಮಿಯವರಿಗೆ ವಿಶೇಷ ಪೂಜೆ ಮಾಡಲಾಯಿತು.   ಮಹಾಮಂಗಳಾರತಿ ನಂತರ ಬಂದಂತಹ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಮಾಡಲಾಗಿತ್ತು. ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ನಗರದ ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮಾಡಲಾಯಿತು.  

ವ್ಯವಸ್ಥಾಪಕರಾದ ಸತ್ಯಕಲಾಮೋಹನ್ ಮಾತನಾಡಿ, ಪ್ರತಿವರ್ಷ ಶನೇಶ್ವರಸ್ವಾಮಿಯ ವಾರ್ಷಿಕ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಿಕೊಂಡು ಬರುತ್ತಿದ್ದೇವೆ. ವಾರ್ಷಿಕೋತ್ಸವ ಅಂಗವಾಗಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ, ಮಜ್ಜಿಗೆ, ಹೆಸರುಬೆಳೆ, ಪಾನಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದ್ರಾಕ್ಷಾಯಿಣಿ, ಅರ್ಚಕರು ಅನಂದ್, ಅರ್ಚಕ ಆರಾಧ್ಯ,  ಹೇರೂರು ರಮೇಶ್, ಸಾವಿರಾರು ಭಕ್ತರು ಇದ್ದರು.

LEAVE A REPLY

Please enter your comment!
Please enter your name here