ಗುಬ್ಬಿ: ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಬಗ್ಗೆ ತಿಳಿದುಕೊಂಡು ಕಾನೂನು ರೀತಿಯಲ್ಲಿ ತಮಗೆ  ದೊರೆಯುವ ಅನುಕೂಲಗಳನ್ನು ಪಡೆದುಕೊಳ್ಳಲು ಮುಂದಾಗಬೇಕು  ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೇಲ್ವಿಚಾರಕಿ ಪಲ್ಲವಿ ತಿಳಿಸಿದರು.

 ಪಟ್ಟಣದ ಹೊರವಲಯದ ಚಿದಂಬರ ಆಶ್ರಮ ಶಾಲೆಯಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ ಹಾಗೂ ಮಕ್ಕಳ ರಕ್ಷಣಾ ಘಟಕ, ಚಿದಂಬರ ಸೇವಾ ಸದನ ಪ್ರೌಢಶಾಲೆ ಇವರುಗಳ ಸಹಯೋಗದಲ್ಲಿ ದತ್ತು ಮಾಸಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಹೆಣ್ಣು ಮಕ್ಕಳು ದುಷ್ಪರಿಣಾಮಗಳಿಗೆ ಮಾರು ಹೋಗದೆ ಉತ್ತಮ ಮಾರ್ಗದಲ್ಲಿ ಸಾಗಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ವಿದ್ಯಾಭ್ಯಾಸ ಮಾಡುವ ಕಡೆ ಗಮನಹರಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ 1098, ಮಕ್ಕಳ ಹಕ್ಕುಗಳು, ಬಾಲಕಾರ್ಮಿಕ ನಿಷೇಧ ಕಾಯ್ದೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

 ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಮಿಷನ್ ಸಂಯೋಜಕ ಶಶಿಧರ್ ಎಚ್ ಜಿ ಮಾತನಾಡಿ,   ವಿದ್ಯಾರ್ಥಿಗಳು ಮೊಬೈಲ್, ಟಿವಿ ಇವುಗಳಿಂದ ದೂರವಿದ್ದು ನಿರಂತರ ಅಭ್ಯಾಸದಲ್ಲಿ ತೊಡಗಿದಾಗ ಮಾತ್ರ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ.

 ವಿದ್ಯಾರ್ಥಿ ಜೀವನದಲ್ಲಿ ನಿಗದಿತ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅಭ್ಯಾಸ ಮಾಡಿದರೆ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿದಂಬರ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯ ಎ ಬಿ ಜಗದೀಶ್, ಸಶಿಕ್ಷಕಿಯರಾದ ಪದ್ಮ , ರಶ್ಮಿ, ಸಹನಾ,ಶಶಿಕಲ ಹಾಗೂ ಆಡಳಿತ ವರ್ಗ,ವಿದ್ಯಾರ್ಥಿಗಳು ಇತರರು ಇದ್ದರು.

LEAVE A REPLY

Please enter your comment!
Please enter your name here