ಗುಬ್ಬಿ : ಮಹಿಳೆ ಅಡುಗೆ ಮನೆಯಿಂದ ಅಂತರಿಕ್ಷದವರೆಗೂ ವಿಶೇಷ ಸಾಧನೆ ಮಾಡುತ್ತಿದ್ದಾಳೆ. ಮಹಿಳಾ ಶಕ್ತಿಯನ್ನು ಇನ್ನಷ್ಟು ಉಜ್ವಲಗೊಳಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಅಖಿಲ ಕರ್ನಾಟಕ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷೆ ಉಮಾಶಾಹಿರ ತಿಳಿಸಿದರು.

ಪಟ್ಟಣದ ಬೆಲ್ಲದಪೇಟೆಯ ವಾಸವಿ ಮಹಲ್ ನಲ್ಲಿ ವಾಸವಿ ಮಹಿಳಾ ಮಂಡಳಿ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ತಮ್ಮನ್ನು ತಾವು ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ,ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.

ಸಾಧಕಸಿರಿ ಪ್ರಶಸ್ತಿ ಪುರಸ್ಕೃತೆ ಭಾರತಿ ಪ್ರಕಾಶ್ ಮಾತನಾಡಿ, ಸಮಾಜದ ಪ್ರತಿಯೊಂದು ಹಂತದಲ್ಲಿ ಮಹಿಳೆಯರು ಪಾತ್ರ ಮತ್ತು ಅನನ್ಯವಾಸುದುದ್ದು. ಒಂದು ಕುಟುಂಬದ ಬೆಳವಣಿಗೆಗೆಯಿಂದ ಹಿಡಿದು ರಾಷ್ಟ್ರದ ಪ್ರಗತಿವರೆಗೆ ಮಹಿಳೆಯರ ಕೊಡುಗೆ ಅಪಾರವಾದದ್ದು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಹೇಳಿಕೊಡುವ ನಿಟ್ಟಿನಲ್ಲಿ ಮಕ್ಕಳು ಸಮಾಜದಲ್ಲಿ ಉತ್ತಮ ಸ್ಥಾನಮಾನ ಗಳಿಸಲು ಅವಕಾಶ ಕಲ್ಪಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದಂತಹ ಮಹಿಳೆಯರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷ ಪ್ರೇಮಲೀಲಾ, ಗೌರವಾಧ್ಯಕ್ಷೆ ರಜಿನಿಸುರೇಶ್, ಪದಾಧಿಕಾರಿಗಳಾದ ಉಪಾಧ್ಯಕ್ಷೆ ಕನ್ನಿಕಾ, ಖಜಾಂಚಿ ಅಭಿಲಾಶ್, ಕಾರ್ಯದರ್ಶಿ ಸುಗುಣ, ನಿರ್ದೇಶಕರಾದ ಸವಿತಾ, ಮಂಜುಳಾ, ಶ್ರೀದೇವಿ, ದೀಪಾ, ಶಾಂತ, ರಶ್ಮಿ, ಲಾವಣ್ಯ, ಸರಸ್ವತಿ, ಸುಮಾನ, ಹಾಗೂ ವಾಸವಿ ಮಹಿಳಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರುಗಳು ಸಾರ್ವಜನಿಕರು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here