ಗುಬ್ಬಿ : ನಿರಂತರ ಜನಸೇವೆಯಲ್ಲಿ ಇರುವ ಗುಬ್ಬಿ  ಶಾಸಕ ಎಸ್.ಆರ್.ಶ್ರೀನಿವಾಸ್ ರವರಿಗೆ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ನೀಡಬೇಕು ಎಂದು  ಕಾಡುಗೊಲ್ಲ ಅಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಬಿ.ಕೆ.ಗಂಗಾಧರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳಾಗುತ್ತಿದ್ದು ರಾಜ್ಯದ ಕಾಡುಗೊಲ್ಲ ಸಮುದಾಯಕ್ಕೆ ಸರ್ಕಾರದಿಂದ ಅನುದಾನಕೊಟ್ಟು ಕಾಡುಗೊಲ್ಲ ಸಮುದಾಯಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಜೊತೆಗೆ ಗುಬ್ಬಿ ಶಾಸಕರು ತಾಲ್ಲೂಕಿನಲ್ಲಿ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಕಾಡುಗೊಲ್ಲರಹಟ್ಟಿಗಳಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕೊಟ್ಟು ಪಕ್ಷಾತೀತವಾಗಿ ಕಾಡುಗೊಲ್ಲ ಹಟ್ಟಿಗಳನ್ನು ಅಭಿವೃದ್ದಿ ಮಾಡಿದ್ದಾರೆ. ಜೆಡಿಎಸ್ ಬಿಟ್ಟು ಕಾಂಗ್ರೇಸ್ ಪಕ್ಷಕ್ಕೆ ಡಿ.ಕೆ.ಶಿವಕುಮಾರ್ ಅವರ ಜೊತೆ ಬಂದು ಗುಬ್ಬಿ ವಿಧಾನ ಸಭಾ ಕ್ಷೇತ್ರವನ್ನು ಇಡೀ ಜಿಲ್ಲೆಯಲ್ಲಿ ಮಾದರಿ ತಾಲ್ಲೂಕನ್ನಾಗಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ಕೊಟ್ಟರೆ ಮತ್ತೋಷ್ವು ಅಭಿವೃದ್ದಿ ಕಾಮಗಾರಿಗಳನ್ನು ಮಾಡಲು ಅನುಕೂಲವಾಗುತ್ತದೆ.  ಕಾಡುಗೊಲ್ಲರ ದಶಕಗಳ ಕನಸು ಎಸ್ ಟಿ ಮೀಸಲಾತಿಗೆ ಸೇರಿಸುತ್ತೇನೆ ಅಂಥ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕೂಡ ರಾಜ್ಯ ಸರ್ಕಾರ ಮಾಡಿಲ್ಲ. ತಾವು ಮುಖ್ಯಮಂತ್ರಿಗಳಾಗುತ್ತೀದೀರಾ ಈಗಲಾದರೂ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.

ಕಾಡುಗೊಲ್ಲ ಅಭಿವೃದ್ದಿ ಸಂಘದ ಕಾರ್ಯದರ್ಶಿ ಹೊಸಹಟ್ಟಿ ಕುಮಾರ್ ಮಾತನಾಡಿ, ರಾಜ್ಯದ‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತ ಡಿಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನವನ್ನು ಕೊಡಬೇಕು. ಕಾಂಗ್ರೇಸ್ ಪಕ್ಷಕ್ಕೆ ಬರುವಾಗಲೇ ಸಚಿವ ಸ್ಥಾನವನ್ನು ಇಟ್ಟುಕೊಂಡು ಬಂದಿದ್ದಾರೆ. ಸತತ ಐದನೇ ಭಾರಿಗೆ ಶಾಸಕರಾಗಿ ಕೆಲಸ ಮಾಡಿದ್ದು ಈ ಹಿಂದೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಗುಬ್ಬಿ ತಾಲ್ಲೂಕಿನಲ್ಲಿ ಸಾಕಷ್ವು ಅಭಿವೃದ್ದಿ ಮಾಡಿ ಜನ ಮನ್ನಣೆಗಳಿಸಿದ್ದಾರೆ.ಕಾಂಗ್ರೇಸ್ ಪಕ್ಷಕ್ಕೆ ಬಂದ ಮೇಲೆ ನೂರಾರು ಕೋಟಿ ಅನುದಾನ ತಂದು ಗುಬ್ಬಿ ತಾಲ್ಲೂಕಿನ ಅಭಿವೃದ್ದಿ ಕೆಲಸ ಮಾಡಿದ್ದಾರೆ.ಸಚಿವ ಸ್ಥಾನಕೊಟ್ಟರೆ ಮತ್ತೋಷ್ವು ಅಭಿವೃದ್ಧಿ ಕೆಲಸವನ್ನು ಮಾಡುತ್ತಾರೆ.ಆದ್ದರಿಂದ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೊಡಬೇಕೆಂದು ಒತ್ತಾಯಿಸಿದರು.

ಇದೇ ಸಂಧರ್ಭದಲ್ಲಿ ಕಾಡುಗೊಲ್ಲ ಅಭಿವೃದ್ದಿ ಸಂಘದ  ತಾಲ್ಲೂಕು ಅಧ್ಯಕ್ಷ ಬಿ.ಕೆ. ಸದಾಶಿವಯ್ಯ  , ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡವೀರಯ್ಯ , ಸಂಘದ ಉಪಾಧ್ಯಕ್ಷ ಮಂಜುನಾಥ್ ,  ಕಾಡುಗೊಲ್ಲ ಸಂಘದ ಗೌರವಾಧ್ಯಕ್ಷ ತಿಪ್ಪಯ್ಯ , ಖಜಾಂಚಿ  ಮುದ್ದೇನಹಟ್ಟಿ ಶ್ರೀನಿವಾಸ್ , ಸಂಘಟನಾ ಕಾರ್ಯದರ್ಶಿ ಹಿಂಡಿಸಿಗೆರೆ ಗೊಲ್ಲರಹಟ್ಟಿ ಜಗದೀಶ್, ಹೋಬಳಿ ಅಧ್ಯಕ್ಷ ಮೋಹನ್ , ಜಗದೀಶ್ , ಚನ್ನಬಸವರಾಜು  ಹಾಗೂ ಸಮುದಾಯದ ಮುಖಂಡರು ಭಾಗಗವಹಿಸಿದ್ದರು

LEAVE A REPLY

Please enter your comment!
Please enter your name here