ಗುಬ್ಬಿ : ಮಕ್ಕಳನ್ನು ಕೆಲಸಕ್ಕೆ ಹಾಕುವುದು ಕಾನೂನುಬಾಹಿರವಾಗಿದ್ದು, ಸಮಾಜದ ಪ್ರತಿಯೊಬ್ಬರೂ ಇದನ್ನು ತಡೆಯಲು ಸಹಕರಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನಾಯಧೀಶರಾದ ಅನುಪಮ.ಡಿ ತಿಳಿಸಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ. ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ, ಕಾರ್ಮಿಕ ಇಲಾಖೆ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯಿದೆ 1986 ರ ಸೆಕ್ಷನ್ ಅಭಿಯಾನದಡಿ ನೇಮಕಗೊಂಡ ಎಲ್ಲಾ ನಿರೀಕ್ಷಕರು ಇವರುಗಳ ಸಹಯೋಗದೊಂದಿಗೆ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧ ದಿನಾಚರಣೆಯಲ್ಲಿ ಮಾತನಾಡಿ, ಕುವೆಂಪು ಅವರ ಪರಿಕಲ್ಪನೆ ವಿಶ್ವ ಮಾನವ, ಮಗು ಹುಟ್ಟುತ್ತಲೇ ವಿಶ್ವ ಮಾನವನಾಗಿ ಹುಟ್ಟುತ್ತಾನೆ.
ನಂತರ ಜಾತಿ,ಧರ್ಮ ಎಂದು ವಿಂಗಡಣೆ ಮಾಡುತ್ತಾರೆ.ಸಂವಿಧಾನದ ಪ್ರಕಾರ ಪ್ರತಿಯೊಂದು ಮಕ್ಕಳಿಗೂ ಶಿಕ್ಷಣದ ಹಕ್ಕು ನೀಡುವುದು ನಮ್ಮ ಜವಾಬ್ದಾರಿಯಾಗಿದೆ. ಪೋಷಕರು ಮಕ್ಕಳನ್ನು ಬಾಲ್ಯದಲ್ಲಿ ಕೆಲಸಕ್ಕೆ ಕಳಿಸದೆ ಶಿಕ್ಷಣ ಕೊಡಿಸಬೇಕು.
ಅವಘಡ ಸಂಭವಿಸುವ ಕಾರ್ಖಾನೆಗಳಲ್ಲಿ ಮಕ್ಕಳನ್ನು ಬಿಡಬಾರದು. ಜೀವ ಅತ್ಯಮೂಲ್ಯವಾದದ್ದು. ಪ್ರತಿ ವರ್ಷ ನ್ಯಾಯಾಲಯದ ವತಿಯಿಂದ ಬಾಲಕಾರ್ಮಿಕರ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ಕಾನೂನು ಬಾಹಿರ ಕೆಲಸಕ್ಕೆ ಶಿಕ್ಷೆ ಇದೆ ಎಂದು ಎಚ್ಚರಿಸುತಿದ್ದೇವೆ ಎಂದು ತಿಳಿಸಿದರು.

ಕಾರ್ಮಿಕ ಕಲ್ಯಾಣಾಧಿಕಾರಿ ತಿಲಕ್ ಮಾತನಾಡಿ, ತಾಲ್ಲೂಕಿನಲ್ಲಿ ಮೂರು ಬಾಲಕಾರ್ಮಿಕ ಹಾಗೂ ಒಂದು ಕಿಶೋರಿ ಕಾರ್ಮಿಕರನ್ನು ಗುರುತಿಸಿ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿ. ವಿದ್ಯಾರ್ಥಿಗಳು ತಮ್ಮ ಸಣ್ಣ ವಯಸ್ಸಿನಲ್ಲಿ ಶಿಕ್ಷಣದ ಕಡೆ ಗಮನ ಕೊಡಬೇಕು. ಪೋಷಕರಿಗೆ ಎಷ್ಟೇ ಕಷ್ಟ ಆದರೂ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬಾರದೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ನಟರಾಜು, ಅಧಿಕ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪೂರ್ಣಿಮಾ ಕೆ ಯಾದವ್, ಸಿವಿಲ್ ನ್ಯಾಯಾಧೀಶರಾದ ಎಸ್.ಪಿ.ಕಿರಣ್, ಅಧಿಕ ಸಿವಿಲ್ ನ್ಯಾಯಾಧೀಶರಾದ ಸವಿತರಾಣಿ,ವಕೀಲರ ಸಂಘದ ಪದಾಧಿಕಾರಿಗಳಾದ ಸಿ.ಕೆ.ರವಿಂದ್ರ, ರವೀಶ್, ಪಿ.ಎಂ.ಪುಷ್ಪಾವತಿ, ಸರ್ಕಾರಿ ಅಭಿಯೋಜಕರಾದ ಕೆ.ಶೋಭಾ, ಕುಮಾರಿ ಅಕ್ಷತಾ, ಆರೋಗ್ಯ ನೀರಿಕ್ಷಕ ರಮೇಶ್, ವಕೀಲರು, ನ್ಯಾಯಾಲಯದ ಸಿಬ್ಬಂದಿ ಅಧಿಕಾರಿಗಳು, ಮತ್ತಿತರರು ಇದ್ದರು.






