ಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿ ದೊಡ್ಡಗುಣಿ ಗ್ರಾಮದ ಕೆರೆಯಲ್ಲಿ ಗುರುವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮದ ಚೈತನ್ಯ (45) ಮಹಿಳೆಯ ಶವ ಪತ್ತೆಯಾಗಿದೆ.
ಕೆರೆಯ ಬಳಿ ತೆರಳಿದ್ದ ಗ್ರಾಮಸ್ಥರು ನೀರಿನಲ್ಲಿ ತೇಲುತ್ತಿರುವ ಶವವನ್ನು ಗಮನಿಸಿ ತಕ್ಷಣ ಸ್ಥಳೀಯರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಚೇಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಶವವನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡರು.





