ಗುಬ್ಬಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಮೆರೆಗು ತರುವ ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಅರ್ಥಪೂರ್ಣ ಆಚರಣೆ ಮಾಡಲು ತಾಲ್ಲೂಕು ಆಡಳಿತ ಸಜ್ಜಾಗಿದೆ ಎಂದು ಇಒ ರಂಗನಾಥ್  ತಿಳಿಸಿದರು.

 ಪಟ್ಟಣದ ತಾಲ್ಲೂಕು ಪಂಚಾಯತಿಯಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿ, ಪ್ರತಿ ವರ್ಷದಂತೆ ನಡೆಸುವ ರಾಜ್ಯೋತ್ಸವಕ್ಕೆ ಈ ಬಾರಿ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ ಮಾಡಲಾಗುತ್ತದೆ.

 ಕಾರ್ಯಕ್ರಮದಲ್ಲಿ ಸಮಾಜದ 9 ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದ.  ಶಿಕ್ಷಣ, ಕೃಷಿ, ಪರಿಸರ, ಕ್ರೀಡೆ, ವೈದ್ಯಕೀಯ, ರಂಗಭೂಮಿ, ಸಾಹಿತ್ಯ, ಜನಪದ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರ ಆಯ್ಕೆಗೆ ತಾಪಂ ಇಓ ಅವರ ಅಧ್ಯಕ್ಷತೆಯ ಸಮಿತಿ ರಚನೆ ಮಾಡಲಾಯಿತು.

ಅರ್ಜಿಗಳು ಅಕ್ಟೋಬರ್ 17ರಿಂದ 23ರ ವರೆಗೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಪಡೆದುಕೊಳ್ಳಬಹುದು. ಅರ್ಜಿಯ ಜೊತೆ ಸಾಧನೆಗೆ ಸಂಬಂಧಿಸಿದ ದಾಖಲಾತಿಗಳನ್ನು ಲಗತ್ತಿಸಿ ತಾಲೂಕು ಪಂಚಾಯಿತಿ ಇಒ ರವರಿಗೆ  ತಲುಪಿಸಲು ತಿಳಿಸಲಾಗಿದೆ.

ಆಯ್ಕೆ ಸಮಿತಿಯಲ್ಲಿ ತಹಸೀಲ್ದಾರ್ ಆರತಿ.ಬಿ   ಮುಖಂಡರಾದ ಸಿ.ಆರ್.ಶಂಕರ್ ಕುಮಾರ್, ಜಿ.ಆರ್.ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಪ್ರಸನ್ನ, ತಾಪಂ ಸಹಾಯಕ ನಿರ್ದೇಶಕ ಜಗನ್ನಾಥ್ ಗೌಡ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಸಮಾಜ ಕಲ್ಯಾಣಾಧಿಕಾರಿ, ಕನ್ನಡ ಸಾಹಿತ್ಯ ಪರಿಷತ್ ಅದ್ಯಕ್ಷ ಯತೀಶ್ ಇರುವರು.

LEAVE A REPLY

Please enter your comment!
Please enter your name here