
ಗುಬ್ಬಿ : ಪ್ರಸ್ತುತ ದಿನಗಳಲ್ಲಿ ನಗರ ಪ್ರದೇಶದಲ್ಲಿ ಸಿಗುವ ಶಿಕ್ಷಣದ ಸೌಲಭ್ಯಗಳು ಇಂದು ಗ್ರಾಮೀಣ ಭಾಗದಲ್ಲಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುವಂತೆ ಮಾಡುವಲ್ಲಿ ಆಚಾರ್ಯ ಶಿಕ್ಷಣ ಸಂಸ್ಥೆ ಶ್ಲಾಘನೀಯ ಎಂದು ಗೃಹ ಮಂಡಳಿಯ ನಿವೃತ್ತ ಮುಖ್ಯ ಇಂಜನೀಯರ್ ರಮೇಶ್ ಅಭಿಪ್ರಾಯಪಟ್ಟರು.
ತಾಲೂಕಿನ ಕಲ್ಲೂರು ಗ್ರಾಮದಲ್ಲಿರುವ ಆಚಾರ್ಯ ವಿದ್ಯಾ ಕೇಂದ್ರದಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಸ್ತು ಪ್ರದರ್ಶನಗಳು ಹೊಸ ವಿಷಯಗಳನ್ನು ಕಲಿಯಲು ಉತ್ತಮ ವೇದಿಕೆ. ವಿಜ್ಞಾನ, ಕಲೆ, ಇತಿಹಾಸ ಅಥವಾ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರದರ್ಶನಗಳು ವಿದ್ಯಾರ್ಥಿಗಳಿಗೆ ಮತ್ತು ಆಸಕ್ತರಿಗೆ ಆಳವಾದ ಮಾಹಿತಿಯನ್ನು ನೀಡುತ್ತವೆ. ಪುಸ್ತಕದಲ್ಲಿ ಓದುವುದಕ್ಕಿಂತ ಕಣ್ಣಾರೆ ನೋಡಿ ಕಲಿಯುವುದು ಹೆಚ್ಚು ಕಾಲ ನೆನಪಿನಲ್ಲಿರುತ್ತದೆ.
ನಾವು ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸ ಕ್ಕೆ ಸಾಕಷ್ಟು ತೊಂದರೆ ಅನುಭವಿಸಿ ಕಷ್ಟದ ದಿನಗಳಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆ ಅಲಂಕರಿಸಿ ಸಾಕಷ್ಟು ಸಾರ್ವಜನಿಕ ಸೇವೆ ಮಾಡಿದ್ದೇನೆ.

ಆಚಾರ್ಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೇಶವಮೂರ್ತಿ ಮಾತನಾಡಿ, ಶಿಕ್ಷಣ ಸಂಸ್ಥೆ ಬೆಳೆಯುವಲ್ಲಿ ಪೋಷಕರು ಹಾಗೂ ಶಿಕ್ಷಕರ ಶ್ರಮ ಸಾಕಷ್ಟಿದೆ. ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಶಾಲೆಯಲ್ಲಿ ಮಕ್ಕಳ ಚಟುವಟಿಕೆ ಹಿನ್ನೆಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ ಆಯೋಜಿಸಿದ್ದು ಶಾಲೆಯ ವಿದ್ಯಾರ್ಥಿಗಳು ವಿಭಿನ್ನ ರೀತಿಯ ಮಾಡಲ್ ಗಳನ್ನು ತಯಾರಿಸಿ ಪ್ರದರ್ಶನ ಮತ್ತು ಅದರ ಪ್ರಮುಖ್ಯತೆ ವಿವರಣೆ ಮಾಡುವ ಮೂಲಕ ಹೆಚ್ಚು ಆಸಕ್ತಿ ವಹಿಸಿ ವಸ್ತು ಪ್ರದರ್ಶನದಲ್ಲಿ ಭಾಗಿಯಾಗಿರುವುದು ಸಂತೋಷದ ಸಂಗತಿ ಎಂದರು.
ಮಾನವ ಹಕ್ಕು ಸೇವಾ ಸಂಸ್ಥೆಯ ಸದಸ್ಯ ಹಾಗೂ ಸಾಮಾಜಿಕ ಹೋರಾಟಗಾರ ಸೆಲೆಬ್ರಿಟಿ ಆನಂದ್ ಮಾತನಾಡಿ ಅದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸುವುದು ಸುಲಭದ ಮಾತಲ್ಲ, ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಸಂಸ್ಥೆಗಳಲ್ಲೂ ಸಹ ಅತಿ ಹೆಚ್ಚು ಪೈಪೋಟಿ ನಡೆಯುತ್ತಿದ್ದು ಶಾಲೆಗಳು ನೀಡುವ ಉತ್ತಮ ಶಿಕ್ಷಣದಿಂದ ಶಾಲೆಗಳ ಹೆಸರು ಗಳಿಸಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಆಚಾರ್ಯ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಪದ್ಮಾವತಿ ಸುರೇಶ್. ಮುಖ್ಯ ಶಿಕ್ಷಕಿ ಉಷಾ. ಸಿಬ್ಬಂದಿಗಳಾದ ಹನುಮಂತಪ್ಪ ಹಾಗೂ ಶಿಕ್ಷಕರು. ಪೋಷಕರು ಹಾಜರಿದ್ದರು.





