ಗುಬ್ಬಿ: ಕರ್ನಾಟಕವು ಕಲೆ ನಾವಿಣ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದುಮುಖ್ಯೋಪಾಧ್ಯಾಯ ಎ.ಬಿ.ಜಗದೀಶ್ ತಿಳಿಸಿದರು.
ಪಟ್ಟಣದ ಹೊರವಲಯದ ಶ್ರೀ ಚಿದಂಬರ ಆಶ್ರಮದ ಸೇವಾ ಸದನ ಪ್ರೌಢಶಾಲೆಯಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಮಗು ಮಾತೃಭಾಷೆಯಲ್ಲಿ ಕಲಿತರೆ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮನೆಯಿಂದಲೇ ಪೋಷಕರು ಕನ್ನಡ ಕಲಿಸುವ ನಿಟ್ಟಿನಲ್ಲಿ ಮಾತೃಭಾಷೆಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹಶಿಕ್ಷಕರಾದ ರಶ್ಮಿ, ಸಹನ, ಶಶಿಕಲಾ ,ಬಿ.ಎಸ್ ಮಲ್ಲಿಕಾರ್ಜುನಯ್ಯ ಹಾಗೂ ವಿದ್ಯಾರ್ಥಿಗಳು ಇತರರು ಇದ್ದರು.





