ಗುಬ್ಬಿ : ತಾಲ್ಲೂಕಿನಲ್ಲಿ 6 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ಅಕ್ಟೋಬರ್ 27ರ ಸೋಮವಾರದಂದು ಬೆಳಗ್ಗೆ 11 ಗಂಟೆಗೆ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಕಸಾಪ ಹಾಗೂ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ ಯತೀಶ್ ಕುಮಾರ್ ತಿಳಿಸಿದ್ದಾರೆ.

 ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 22 ರಂದು ನಡೆಸಲು ತೀರ್ಮಾನಿದ್ದು, ಈ ವಿಚಾರವಾಗಿ ಚರ್ಚಿಸಲು ಶಾಸಕರು, ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎಸ್‌ ಆರ್ ಶ್ರೀನಿವಾಸ್‌ ಹಾಗೂ   ತಹಶೀಲ್ದಾರ್ ಆರತಿ.ಬಿ ಇವರ ನೇತೃತ್ವದಲ್ಲಿ 2 ನೇ ಪೂರ್ವಭಾವಿ ಸಭೆಯನ್ನು ಅಕ್ಟೋಬ‌ರ್ 27ರ ಸೋಮವಾರ ತಾಲ್ಲೂಕು ಕಛೇರಿಯ ಕಂದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಕರೆಯಲಾಗಿದೆ. ಈ ಸಭೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ಈ ಸಭೆಗೆ ಕನ್ನಡ ನಾಡು, ನುಡಿ, ಸಂಸ್ಕೃತಿಯ ಬಗ್ಗೆ ಅಪಾರ ಗೌರವವಿರುವ ತಾಲ್ಲೂಕಿನ ವಿವಿಧ ಪಕ್ಷದ ಮುಖಂಡರುಗಳು, ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು, ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರು, ತಾಲ್ಲೂಕು ಕ.ಸಾ.ಪ ಸದಸ್ಯರುಗಳು ಮತ್ತು ಸಾರ್ವಜನಿಕರು   ಹಾಜರಿದ್ದು   ಸಲಹೆ, ಮಾರ್ಗದರ್ಶನ, ಸಹಕಾರ ನೀಡಬೇಕೆಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here