
ಗುಬ್ಬಿ: ಠೇವಣಿದಾರರಿಗೆ ಮತ್ತು ಖಾತೆದಾರರಿಗೆ ರಿಯಾಯಿತಿ ದರದಲ್ಲಿ ಅಪಘಾತ ವಿಮೆ ಮತ್ತು ಆರೋಗ್ಯ ವಿಮೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ವ್ಯವಸ್ಥಾಪಕ ಸುಧೀಂದ್ರ ತಿಳಿಸಿದರು.
ಪಟ್ಟಣದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಬ್ಯಾಂಕ್ ಸ್ಥಾಪನೆಯಾಗಿ 102 ವರ್ಷಗಳು ತುಂಬಿದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಬ್ಯಾಂಕ್ ಗ್ರಾಹಕರಿಗಾಗಿ ಹಲವಾರು ವಿಶೇಷ ಕೊಡುಗೆಗಳು ಮತ್ತು ಡಿಜಿಟಲ್ ಸೌಲಭ್ಯಗಳನ್ನು ಪರಿಚಯಿಸಿದೆ. ಈ ಶತಮಾನೋತ್ತರ ಪ್ರಯಾಣದ ಸವಿನೆನಪಿಗಾಗಿ ಸಾಮಾನ್ಯ ನಾಗರಿಕರಿಗೆ ಮತ್ತು ಹಿರಿಯ ನಾಗರಿಕರಿಗೆ ನಿಗದಿತ ಅವಧಿಯ ಠೇವಣಿಗಳ ಮೇಲೆ ಸ್ಪರ್ಧಾತ್ಮಕ ಬಡ್ಡಿ ದರಗಳನ್ನು ನೀಡುತ್ತಿದೆ.

ಗ್ರಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ, ವಾಹನ, ಒಡವೆ ಸಾಲಗಳನ್ನು ನೀಡಲಾಗುತ್ತದೆ. ಇದರ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಂಡು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಗ್ರಾಹಕರು ಮತ್ತು ಬ್ಯಾಂಕ್ ಸಿಬ್ಬಂದಿಗಳು ಗುಬ್ಬಿ ಶಾಖೆಯ ವ್ಯವಸ್ಥಾಪಕ ಸುಧೀಂದ್ರ ಇವರು 202 ಕೋಟಿ ವಹಿವಾಟು ಮಾಡಿರುವುದರಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಜಿಆರ್ ಶಿವಕುಮಾರ್, ವೀರಶೈವ ಸಮಾಜದ ಅಧ್ಯಕ್ಷ ಕಾಂತರಾಜು, ಬ್ಯಾಂಕ್ ಸಿಬ್ಬಂದಿಗಳು, ಗ್ರಾಹಕರು ಮತ್ತಿತರರು ಇದ್ದರು.






