ಗುಬ್ಬಿ :- ತಾಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಕಡಬ ಹೋಬಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮಕ್ಕಳಿಗೆ ಪ್ರಾಂಶುಪಾಲರಾದ ಶ್ರೀನಿವಾಸ್ ರೆಡ್ಡಿ, ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ ಸಿ ಶಿವಣ್ಣ ನವರು ಹಾಗೂ ಸಿಬ್ಬಂದಿ ವರ್ಗ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವಕುಮಾರ್ ಹಾಗೂ ಎಸ್ ಡಿ ಎಂ ಸಿ ಸದಸ್ಯರುಗಳು ಹಾಗೂ ಊರಿನ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.





