ಗುಬ್ಬಿ : ತಾಲ್ಲೂಕಿನ ಸಿಎಸ್ ಪುರ ಹೋಬಳಿಯ ಮಣಿಕುಪ್ಪೆ ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ನಾರಸಿಂಹಸ್ವಾಮಿ ಮತ್ತು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನ.23 ರಂದು ಹನುಮಮಾಲೆ, ಲಕ್ಷದೀಪೋತ್ಸವ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಲಾಗಿದೆ.
ನ.23 ರಂದು ಬೆಳಗ್ಗೆಯಿಂದ ಅಂಜನೇಯಸ್ವಾಮಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಸಂಜೆ 4 ಗಂಟೆಗೆ ದೇವರ ಮೂರ್ತಿಯನ್ನು ಅನೆಯ ಮೇಲೆ ಕೂರಿಸಿ ಅಂಬಾರಿ ಮರವಣಿಗೆಯನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಮಾಡಲಾಗುತ್ತದೆ. ಇದೇ ಸಂದರ್ಭದಲ್ಲಿ ಮಹಾ ದಾಸೋಹ ವ್ಯವಸ್ಥೆಯನ್ನು ಮಾಡಲಾಗುತ್ತದೆ.





