ಗುಬ್ಬಿ: ಪಟ್ಟಣದ ಮಾರುತಿ ನಗರ ರಾಯವಾರ ರಸ್ತೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಶನೇಶ್ವರಸ್ವಾಮಿ ಅವರ 24ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವ್ಯವಸ್ಥಾಪಕರಾದ ಸತ್ಯಕಲಾ ಮೋಹನ್ ತಿಳಿಸಿದ್ದಾರೆ.
ಏಪ್ರಿಲ್ 20 ರಂದು ಅಕ್ಷಯ ತೃತೀಯ ದಿನದಂದು 24ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 6 ಗಂಟೆಗೆ ರುದ್ರಾಭಿಷೇಕ, ಗಣಪತಿ ಹೋಮ, ವಾಸ್ತು ಹೋಮ, ನವಗ್ರಹ ಹೋಮ, ನಂತರ ಶ್ರೀ ಶನೇಶ್ವರ ಸ್ವಾಮಿಯವರಿಗೆ ವಿಶೇಷ ಪೂಜೆ, ಮಧ್ಯಾಹ್ನ 12 ಗಂಟೆಗೆ ಪೂರ್ಣಾವತಿ ಒಂದು ಗಂಟೆಗೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಒಂದು ಗಂಟೆಗೆ ಬಂದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಗುಬ್ಬಿ ನಗರದಲ್ಲಿ ವಾದ್ಯಗಳೊಂದಿಗೆ ಶ್ರೀಶನೇಶ್ವರ ಸ್ವಾಮಿಯವರ ಮೆರವಣಿಗೆಯನ್ನು ಮಾಡಲಾಗುತ್ತದೆ. ಭಕ್ತರು ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ.





