ಗುಬ್ಬಿ: ಪ್ರಸ್ತುತ ಒತ್ತಡದ ಬದುಕಿನಲ್ಲಿ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಉತ್ತಮ ಸಾಧನವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ನಟರಾಜ್ ತಿಳಿಸಿದರು.

ಪಟ್ಟಣದ ಜೂನಿಯರ್ ಕಾಜನನ ಕಾಲೇಜು ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಬಾಲಕರ ಪಾಠಶಾಲೆ ಹಾಗೂ ಪ್ರೌಢಶಾಲಾ ದೈ.ಶಿ.ಶಿಕ್ಷಕರ ಸಂಘ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ 2025-26 ನೇ ಸಾಲಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೈಹಿಕ ಕಸರತ್ತು ಎಂಬುದು ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿದೆ. ಏಕಾಗ್ರತೆ ಸಾಧಿಸುವ ಮನಸ್ಥಿತಿ ಕ್ರೀಡೆಯಿಂದ ಸಾಧ್ಯ ಎಂದರು.

ಪಟ್ಟಣ ಪಂಚಾಯ್ತಿ ಮೊಹಮ್ಮದ್ ಸಾಧಿಕ್ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ತೀರ್ಪುಗಾರರು ನೀಡುವ ತೀರ್ಪನ್ನು ಅಂತಿಮ ಎಂದು ವಿದ್ಯಾರ್ಥಿಗಳು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಯ ಜೊತೆಗೆ ಓದುವುದಕ್ಕೆ ಹೆಚ್ಚು ಸಮಯ ನೀಡಬೇಕು. ಪರೀಕ್ಷೆಗಳು ಹತ್ತಿರ ಬರುತ್ತಿದ್ದಂತೆ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತ ಮಾಡಿ ಓದಿನ ಕಡೆ ಹೆಚ್ಚು ಗಮನ ಹರಿಸಬೇಕು. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ಮೂಲಕ ತಂದೆ ತಾಯಿಗಳಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು.

ಪಪಂ ಸದಸ್ಯ ಜಿ. ಸಿ ಕೃಷ್ಣಮೂರ್ತಿ ಮಾತನಾಡಿ, ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದಕ್ಕೆ ಉತ್ತಮ ತರಬೇತಿ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರತಿದಿನ ವಿದ್ಯಾರ್ಥಿಗಳು ದೇಹವನ್ನು ದಂಡಿಸುವ ಮೂಲಕ ಆರೋಗ್ಯವನ್ನು ಪಡೆದುಕೊಳ್ಳಬೇಕು.

ಪಿಎಂ ಪೋಷಣ್ ಸಹಾಯಕ ನಿರ್ದೇಶಕ ಜಗದೀಶ್ ಮಾತನಾಡಿ, ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗುತ್ತದೆ ಎಂದರು.

ತಾಲೂಕು ದೈಹಿಕ ಶಿಕ್ಷಣ ಪರಿವಿಕ್ಷಕ ರಮೇಶ್, ಎಸ್ ಡಿ ಎಂ ಸಿ ಅಧ್ಯಕ್ಷ ಆನಂದ್, ಹೆಚ್.ಎ.ಎಲ್.ಹಾಲೇಶ್, ಮುಖ್ಯ ಶಿಕ್ಷಕಿ ಮಂಜುಳಾ, ಹಿರಿಯ ಶಿಕ್ಷಕರಾದ ಕೆ. ಎನ್ ಸುಬ್ರ ಮಣ್ಯ, ನಟರಾಜು, ಸಹ ಶಿಕ್ಷಕರರಾದ ನಿತ್ಯಶ್ರೀ, ಚಂದನ, ಪುರುಷೋತ್ತಮ್, ಶ್ರೀದೇವಿ, ಅರ್ಚನಾ, ಈರಮ್ಮ, ರಘುನಾಥ್, ಪ. ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಸಾಧಿಕ್, ಸಾವಿತ್ರಿ ಬಾ ಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಲಕ್ಷ್ಮಿ ಕಾರ್ಯದರ್ಶಿ ಮಂಜುಳಾ, ತಾಲೂಕು ದೈಹಿಕ ಶಿಕ್ಷಕರ ಸಂಘದ ಖಜಾಂಚಿ ಈರಮ್ಮ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಪದ್ಮಾವತಿ, ಪಿ ಆರ್‌ಚನ್ನಬಸವಯ್ಯ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷಕುಮಾರಸ್ವಾಮಿ ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here