ಗುಬ್ಬಿ : ತಾಲ್ಲೂಕಿನ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಗೌರಿಪುರ  ಶಾಲೆಯ ಸಹ ಶಿಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದ ಚಿಕ್ಕೇಗೌಡರು ಎಚ್.ಎಚ್ ಇವರು ಗೌರಿಪುರ ಗ್ರಾಮದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದಾಗ  ಅವರಿಗೆ ಪಾರ್ಶ್ವವಾಯು ಆಗಿರುವುದರಿಂದ ಚಿಕಿತ್ಸೆಗಾಗಿ ತುಮಕೂರು ನಗರದ ಪವನ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದ್ದರಿಂದ ತುರ್ತಾಗಿ ಅವರಿಗೆ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಭರಿಸಿ ಹೆಚ್ಚಿನ ಚಿಕಿತ್ಸೆಗೆ ಒಳಗಾಗಲು ತಾವುಗಳು ಅನುವು ಮಾಡಿಕೊಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ   ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ  ಅಧ್ಯಕ್ಷ ಜಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಟಿ.ಆರ್.ಕುಮಾರ್ ಹಾಗೂ ಪದಾಧಿಕಾರಿಗಳು, ನಿರ್ದೇಶಕರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here