ಕೊರಟಗೆರೆ ಬಸ್ ನಿಲ್ದಾಣದಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ಮಳಿಗೆ ಉದ್ಘಾಟಿಸಿದ ಜಿಲ್ಲಾಧಿಕಾರಿ

ತುಮಕೂರು: ರಾಜ್ಯ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಮಾಡುವುದೇ ಈ ಪ್ರದರ್ಶನದ ಉದ್ದೇಶ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿ ಮಳಿಗೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷ್ಮೀ,  ಭಾಗ್ಯಜ್ಯೋತಿ, ಅನ್ನಭಾಗ್ಯ, ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳೂ ಸೇರಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಗ್ರಾಮೀಣ ಬಡವರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ರಾಜ್ಯದ ಬಹುತೇಕ ಜನರು ಸರ್ಕಾರದ ಒಂದಿಲ್ಲೊಂದು ಯೋಜನೆಗಳ ಫಲಾನುಭವಿಯಾಗಿದ್ದಾರೆ ಎಂದ ಅವರು, ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳ ಮಾಹಿತಿ ಮಳಿಗೆ ಸ್ಥಾಪಿಸಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿರುವುದು ಪ್ರಶಂಸನೀಯ ಎಂದರು.

ಈ ಸಂದರ್ಭದಲ್ಲಿ, ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಗೋಪಿನಾಥ್, ಪಟ್ಟಣಪಂಚಾಯ್ತಿ ಸದಸ್ಯ ಓಬಳರಾಜ್,  ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಕೊರಟಗೆರೆ ತಹಸೀಲ್ದಾರ್ ಮಂಜುನಾಥ್ ಹಾಗೂ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here