ಗುಬ್ಬಿ: ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಿ ಗ್ರಾಮೀಣ ಭಾಗದಲ್ಲಿಯೂ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ಎ. ಶ್ರೀಜಾ ತಾಲ್ಲೂಕಿನ ಸುಗ್ಗನಪಾಳ್ಯ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದರು.

ಶಿಕ್ಷಣ ಇಲಾಖೆ, ಪೋಷಕರು, ಎಸ್‌ಡಿಎಂಸಿ ಸದಸ್ಯರು, ಸಾರ್ವಜ-ನಿಕರಿಂದ ಅಗತ್ಯ ಮಾಹಿತಿ ಪಡೆದರು. ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನವನ್ನು ಸರ್ಕಾರಿ ಶಾಲೆಗಳು ಬಳಸಿಕೊಳ್ಳುತ್ತಿರುವ ರೀತಿ ಹಾಗೂ ಶಾಲೆಗಳು ಸ್ಥಳೀಯ ಸಂಸ್ಥೆಗಳು, ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳ ಜೊತೆ ಹೊಂದಿರುವ ಭಾಂದವ್ಯದ ಬಗ್ಗೆ ವಿಚಾರಣೆ ನಡೆಸಿದರು.

ಶಿಕ್ಷಣ ಇಲಾಖೆಯ ಕಿರಿಯ ಕಾರ್ಯಕ್ರಮ ಅಧಿಕಾರಿ ಹೇಮಲತಾ, ಡಿಡಿಪಿಐ ರಘುಚಂದ್ರ, ಡಿವೈಎಸ್‌ಪಿ ಶ್ರೀನಿವಾಸ್‌, ಚಾಲುಕ್ಯ ಆಸ್ಪತ್ರೆ ಸಿಇಒ ಡಾ.ನಾಗಭೂಷಣ್‌, ಮುಖ್ಯಶಿಕ್ಷಕ ಲಕ್ಷ್ಮಣ್, ಎಸ್‌ಡಿಎಂಸಿ ಅಧ್ಯಕ್ಷ, ಸದಸ್ಯರು, ಶಿಕ್ಷಕರು ಮತ್ತು ಪೋಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here